BREKKING NEWS- ಡಿ. 1 ರಂದು ಉದ್ಧವ್ ಠಾಕ್ರೆ ಸಿಎಂ.! ಮುಹೂರ್ತ ಫಿಕ್ಸ್..!
ಡಿ. 1 ರಂದು ಉದ್ಧವ್ ಠಾಕ್ರೆ ಸಿಎಂ – ಶಿವಾಜಿ ಪಾರ್ಕ್ನಲ್ಲಿ ನಡೆಯಲಿದೆ ಪ್ರಮಾಣ ವಚನ ಸ್ವೀಕಾರ
ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಮತ್ತೊಮ್ಮ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ಪೀಕರಿಸಲು ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 1ರಂದು ಶಿವಾಜಿ ಪಾರ್ಕ್ ನಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶನಿವಾರ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಿಜೆಪಿಯ ದೇವೇಂದ್ರ ಫಡ್ನವೀಸ್, ಇಂದು ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದಂತೆ ಬಹುಮತ ಸಾಬೀತು ಪಡಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ.
ಹೀಗಾಗಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ಸಿಪಿ ಮೈತ್ರಿ ಪಕ್ಷದ ಸರ್ಕಾರ ನಾಳೆ ಮಹಾರಾಷ್ಟ್ರದಲ್ಲಿ ಅಸ್ಥಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಪ್ರಮಾಣ ವಚನ ಕಾರ್ಯಕ್ರಮವನ್ನು ಡಿಸೆಂಬರ್ 1 ರಂದು ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದಿಢೀರ್ ಬೆಳವಣಿಗೆ ಕಂಡಿದ್ದ ಮಹಾರಾಷ್ಟ್ರದಲ್ಲಿ ಬಿಜೆಪಿ – ಎನ್ ಸಿ ಪಿ ನೇತೃತ್ವದ ಮೈತ್ರಿ ಸರ್ಕಾರ ರಚನೆಯಾಗಿತ್ತು. ಈ ಮೂಲಕ ಮತ್ತೆ ಮಹಾರಾಷ್ಟ್ರ ಸಿಎಂ ಆಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದರೇ, ಡಿಸಿಎಂ ಆಗಿ ಎನ್ ಸಿ ಪಿಯ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದರು.
ಈ ಎಲ್ಲಾ ಬೆಳವಣಿಗೆಯ ನಂತ್ರ, ಕಾಂಗ್ರೆಸ್, ಎನ್ ಸಿ ಪಿ ಮತ್ತು ಶಿವಸೇನೆ ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಲ್ಲದೇ ರಾಜ್ಯಪಾಲರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು. ಇಂತಹ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನಾಳೆ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಬಹುಮತ ಸಾಭೀತು ಪಡಿಸಲು ಡೆಡ್ ಲೈನ್ ನೀಡಿದ್ದರು. ಇದರ ಮಧ್ಯೆ ಡಿಸಿಎಂ ಅಜಿತ್ ಪವಾರ್ ಕೂಡ ರಾಜೀನಾಮೆ ಸಲ್ಲಿಸಿದ್ದರು.
ಈ ಬಳಿಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ತಾವು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೇ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಕೂಡ ಸಲ್ಲಿಸಿದ್ದರು. ಈ ಬೆಳವಣಿಗೆಯ ನಂತ್ರ ಇದೀಗ ಮಹಾರಾಷ್ಟ್ರದ ಸಿಎಂ ಆಗಿ ಶಿವಸೇನೆಯ ಉದ್ದವ್ ಠಾಕ್ರೆ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಡಿಸೆಂಬರ್ 1ರಂದು ಶಿವಾಜಿ ಪಾರ್ಕ್ ನಲ್ಲಿ ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.