ಪ್ರಮುಖ ಸುದ್ದಿ
ಕಾರ್ ಪಲ್ಟಿ : ತಾಯಿ-ಮಗಳು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ!
ಕಲಬುರಗಿ : ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಸೈದಾಪುರ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನುಳಿದ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮೃತರನ್ನು ಯಡ್ರಾಮಿ ತಾಲ್ಲೂಕಿನ ಆಲೂರು ಗ್ರಾಮದ ಶರಣಮ್ಮ (58), ಮಗಳು ಭಾಗಮ್ಮ (25) ಎಂದು ಗುರುತಿಸಲಾಗಿದೆ. ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯಡ್ರಾಮಿಯಿಂದ ಆಲೂರಿಗೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಯಡ್ರಾಮಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.