ಪ್ರಮುಖ ಸುದ್ದಿ
ಹೆದ್ದಾರಿ ಬದಿ ಲಾರಿ ಟೈರ್ ಬದಲಿಸುವಾಗ ಅವಘಡ : ಇಬ್ಬರು ಸಾವು
ಚಿತ್ರದುರ್ಗ: ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಟೈರ್ ಬದಲಿಸುವ ವೇಳೆ ವೇಗವಾಗಿ ಬಂದ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಹರಿದು ಮದ್ಯಪ್ರದೇಶ ಮೂಲದ ಚಾಲಕ ರಾಕೇಶ್ ನಿಗ್ವಾಲ್ ಹಾಗೂ ಕ್ಲೀನರ್ ಪಿಂಟು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.