ಪ್ರಮುಖ ಸುದ್ದಿ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತ ಸೇನೆ

ವಿವಿ ಡೆಸ್ಕ್ಃ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ತ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವದನ್ನು ಅರಿತ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುವ ಮೂಲಕ ಮೂವರು ಉಗ್ರರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.

ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆ ಕೈಗೊಂಡಿದ್ದು, ಶರಣಾಗುವಂತೆ ಸೂಚನೆ ನೀಡಿದರೂ, ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದರು. ಆಗ ಪ್ರತಿ ದಾಳಿ ನಡೆಸಿದ ಭಾರತದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಆದಾಗ್ಯೂ ಇನ್ನೂ ಹಲವು ಭಯೋತ್ಪಾದಕರು ಈ ಪ್ರದೇಶದಲ್ಲಿ ಅವಿತಿರುವ ಸಾಧ್ಯತೆ ಇದ್ದು, ಪೊಲೀಸರು ಹಾಗೂ ಯೋಧರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button