ಪ್ರಮುಖ ಸುದ್ದಿ
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಬಿತ್ತು ಕೇಸು!
ಮೈಸೂರು: ಸಿಎಂ ಸಿದ್ಧರಾಮಯ್ಯ ಅಧಿಕಾರದ ಆಸೆಗಾಗಿ ಯಾರ ಬೂಟನ್ನು ಬೇಕಾದರು ನೆಕ್ಕುತ್ತಾರೆ ಎಂದು ಇತ್ತೀಚೆಗಷ್ಟೇ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬೆಳಗಾವಿಯ ಕಿತ್ತೂರಿನಲ್ಲಿ ಹೇಳಿಕೆ ನೀಡಿದ್ದರು. ಕೇಂದ್ರ ಸಚಿವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು. ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕ ಕೇಂದ್ರ ಸಚಿವ ಹೆಗಡೆ, ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರ ಬಗ್ಗೆ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿತ್ತು.
ನ್ಯಾಯಾಲಯದ ಸೂಚನೆ ಮೇರೆಗೆ ಮೈಸೂರಿನ ದೇವರಾಜ ಠಾಣೆಯ ಪೊಲೀಸರು ಸಚಿವ ಅನಂತಕುಮಾರ ಹೆಗಡೆ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಕಲಂ 153/ಎ , 504 ರ ಅಡಿಯಲ್ಲಿ ನಿಂದನೆ, ಮತ್ತು ಪ್ರಚೋದನೆ ಆರೋಪದ ಮೇಲೆ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ.