ಪ್ರಮುಖ ಸುದ್ದಿ
ವಿಶಾಲ ಹೃದಯವಂತಿಕೆಯ ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯ- ಮೋದಿ
ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯ- ಮೋದಿ
ವಿವಿ ಡೆಸ್ಕ್ಃ ರಾಜ್ಯದಾದ್ಯಂತ ಇಂದು ಕನ್ನಡ ಡಿಂಡಿಮ ಮೊಳಗುತಿದ್ದು, 64 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ದಲ್ಲಿರುವ ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮೂಲಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ಅಲ್ಲದೆ ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ ಎಂದು ಟ್ವಿಟ್ ನಲ್ಲಿ ಬಣ್ಣಿಸಿದ್ದಾರೆ.
ಮತ್ತು ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು, ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿ ಗಾಗಿ ಪ್ರಾರ್ಥಿಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.