Homeಪ್ರಮುಖ ಸುದ್ದಿ
ದರ್ಶನ್ ಸೇರಿ ಉಳಿದ ಎಲ್ಲಾ ಆರೋಪಗಳಿಗೆ 7 ದಿನ ಪೊಲೀಸ್ ಕಸ್ಟಡಿ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ , ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಬಿಯೋಜಕ ಕೋರಿದರೆ, ದರ್ಶನ್ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್ ಕಣ್ಣೀರು ಹಾಕಿದ ಘಟನೆ ನಡೆಯಿತು.