ಪ್ರಮುಖ ಸುದ್ದಿ
ಜೂ.12ರಂದು ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ
ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೂನ್ 12 ರಂದು ಆಂದ್ರಪ್ರದೇಶ ಸಿಎಂ ಆಗಿ ನಾರಾ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅವರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಕ್ಷಣವಾಗಿದೆ ಎಂದು ಟಿಡಿಪಿ ಪಕ್ಷ ಹೇಳಿದೆ. ಚಂದ್ರಬಾಬು ನಾಯ್ಡು ಅವರು ಇಂದು ಎನ್‌ಡಿಎ ಒಕ್ಕೂಟಕ್ಕೆ ಟಿಡಿಪಿ ಬೆಂಬಲವನ್ನು ಘೋಷಣೆ ಮಾಡಿದ್ದು, ನರೇಂದ್ರ ಮೋದಿ ಭಾರತಕ್ಕೆ ಸರಿಯಾದ ಸಮಯದಲ್ಲಿ ಸರಿಯಾದ ನಾಯಕ ಎಂದು ಹೇಳಿದ್ದಾರೆ.