ಪ್ರಮುಖ ಸುದ್ದಿ
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು!
ದೆಹಲಿ: ನಿನ್ನೆಯಿಂದ ನಾಪತ್ತೆ ಆಗಿದ್ದ ಐಎನ್ ಎಕ್ಸ್ ಮೀಡಿಯಾ ಹಗರಣದ ಆರೋಪಿ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಹೀಗಾಗಿ, ನಿನ್ನೆ ರಾತ್ರಿಯಿಂದಲೇ ಚಿದಂಬರಂ ಬಂಧನಕ್ಕೆ ಬಲೆ ಬೀಸಿದ್ದ ಅಧಿಕಾರಿಗಳು ಇಂದು ಚಿದಂಬರಂ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ.
ನಾಪತ್ತೆ ಆಗಿದ್ದ ಚಿದಂಬರಂ ಇಂದು ಸಂಜೆ ಏಕಾಏಕಿ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷವಾಗಿ ಪತ್ರಿಕಾಗೋಷ್ಠಿ ನಡೆಸಿದರು. ಬಳಿಕ ಅಲ್ಲಿಂದ ತೆರಳಿದ ಚಿದಂಬರಂ ಬೆನ್ನು ಬಿದ್ದು ಸಿಬಿಐ ಅಧಿಕಾರಿಗಳು ಚಿದಂಬರಂ ನಿವಾಸದ ಕಂಪೌಂಡ್ ಹಾರಿ ಮನೆಗೆ ಪ್ರವೇಶಿಸಿದ್ದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೆಹಲಿಯ ಲೋದಿ ರಸ್ತೆಯಲ್ಲಿರುವ ಸಿಬಿಐ ಮುಖ್ಯ ಕಚೇರಿಗೆ ಕರೆದೊಯ್ದು ವಿಚಾರಣೆ ಆರಂಭಿಸಿದ್ದಾರೆ. ವಿಚಾರಣೆ ಬಳಿಕ ಚಿದಂಬರಂ ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.