Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ
ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಪಶ್ಚಿಮ ಘಟ್ಟಗಳಂತಹ ಪ್ರವಾಸಿ ತಾಣಗಳಲ್ಲಿ ಜಲಮೂಲಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ನಿನ್ನೆಯಿಂದ ಜುಲೈ 22ರ ವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಭಾಗದ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ಲೋಕೋಪಯೋಗಿ ಇಲಾಖೆ ಎಇಇ ಮನವಿ ಮೇರೆಗೆ ನಿರ್ಬಂಧ ಹೇರಲಾಗಿದೆ.
ಕಾಫಿನಾಡು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಗಿರಿ ಪ್ರದೇಶದಲ್ಲಿ ಕಿರಿದಾಗ ರಸ್ತೆ ತಿರುವು ಹೊಂದಿರುವ ರಸ್ತೆಗಳಲ್ಲಿ ಸಂಚಾರ ಕಷ್ಟಕರವಾಗಿದ್ದು, ಪ್ರವಾಸಿಗರಿಗೆ ಈ ಮಾರ್ಗದಲ್ಲಿ ವಾಹನಗಳನ್ನು ತರದೆ ಇರಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, 22ರ ನಂತರ ಮುಳ್ಳಯ್ಯನಗಿರಿ ಮತ್ತೆ ಓಪನ್ ಆಗೋ ಸಾಧ್ಯತೆ ಇದೆ ಎನ್ನಲಾಗಿದೆ.