Homeಪ್ರಮುಖ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ : ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ..!
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿದ ಪರಿಣಾಮ ರಸ್ತೆ ಮೇಲೆ ಮಣ್ಣು, ಮರಗಳು ಬಿದ್ದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಚಂದ್ರದೋಣ ಪರ್ವತ ಸಾಲುಗಳಲ್ಲಿ ಭೂಕುಸಿತ ಸಂಭವಿಸಿದೆ. ದತ್ತಪೀಠ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್ ಆಗಿದ್ದು, ಮುಂಜಾಗೃತ ಕ್ರಮವಾಗಿ ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಂದ್ರದ್ರೋಣ ಪರ್ವತ ಸಾಲುಗಳಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.