ಪ್ರಮುಖ ಸುದ್ದಿ
ವಿದ್ಯಾರ್ಥಿಗಳ ಸಾವು: ತನಿಖೆಗೆ ಆದೇಶ, 5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ವಿದ್ಯುತ್ ಸ್ಪರ್ಶಸಿ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ಘಟನೆ ದುರದೃಷ್ಟರ ಎಂದಿದ್ದು ವಿದ್ಯಾರ್ಥಿಗ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಂತೆಯೇ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಗೆ ಸೂಚನೆ ನೀಡಿದ್ದು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೊಪ್ಪಳ ಡಿಸಿಗೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.