ಸಿಎಂ ಸಿದ್ಧರಾಮಯ್ಯ ಹೆಗಲೇರಿದ ‘ಬೇಬಿಬೆಟ್ಟ’!
ಸಿಎಂ ಸಿದ್ರಾಮಯ್ಯಗೆ ಶುರುವಾಯ್ತಾ ಸಂಕಷ್ಟ..!
ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಕ್ರಮ ಗಣಿಗಾರಿಕೆಗೆ ಒತ್ತಡ ಏರಿದ ಆರೋಪ ಸಿ.ಎಂ.ಸಿದ್ರಾಮಯ್ಯನವರ ಹೆಗಲೇರಿದೆ.
ಆರ್ ಟಿಐ ಕಾರ್ಯಕರ್ತ ರವೀಂದ್ರ ಎಂಬುವರು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ “ಬೇಬಿ ಬೆಟ್ಟ” ದಲ್ಲಿ ಅಕ್ರಮ ಗಣಿಗಾರಿಕೆಗೆ ಅನುವು ಮಾಡಿಕೊವಂತೆ ಸಿ.ಎಂ.ಸಿದ್ಧರಾಮಯ್ಯ ಅವರು, ಅಲ್ಲಿನ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರೆಂಬ ಆರೋಪ ಕೇಳಿಬಂದಿದೆ.
ಗಣಿಗಾರಿಕೆಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿರುವ ಕುರಿತು ದಾಖಲೆಗಳ ಸಮೇತ ರಾಜ್ಯಪಾಲರು ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದೇನೆ ಎಂದು ಆರ್ ಟಿಐ ಕಾರ್ಯಕರ್ತ ರವೀಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಮೈಸೂರು ಮಹಾರಾಜರಿಗೆ ಸೇರಿರುವ ಬೇಬಿ ಬೆಟ್ಟದ 1623 ಎಕರೆ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಮೂಲಕ ಅಧಿಕಾರ ದುರಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
2014 ರ ಫೆ. 25 ರಂದು ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವಂತೆ ತಾಕೀತು ಮಾಡಿದ್ದಾರೆ ಎಂದು ರವೀಂದ್ರ ತಿಳಿಸಿದ್ದಾರೆ.
ಈ ಪ್ರಕರಣ ಚುನಾವಣ ವರ್ಷದಲ್ಲಿ ಸಿಎಂ ಅವರಿಗೆ ಬೆಂಬಿಡದೆ ಕಾಡಲಿದೆ ಎಂಬುದು ಕಾನುನು ತಜ್ಞರ ಅಭಿಪ್ರಾಯವಾಗಿದೆ. ಆದರೆ, ಸಿಎಂ ಸಿದ್ಧರಾಮಯ್ಯ ಈ ಆರೋಪವನ್ನು ಹೇಗೆ ಎದುರಿಸುತ್ತಾರೆ, ಹೇಗೆ ಪ್ರತಿಕ್ರಿಯಿಸಲಿದ್ದಾರೆ. ಮತ್ತು ಆರೋಪ ದೊಡ್ಡಮಟ್ಟದಲ್ಲಿ ಭುಗಿಲೆಳದಂತೆ ಶಮನಿಸಲು ಯಾವತಂತ್ರ ಹೂಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.