ದೇಶದಲ್ಲಿಯೇ ಕರ್ನಾಟಕ ನಂ-1 ಸ್ಥಾನ ಮಾಡುವೆ – ಸಿಎಂ ಬೊಮ್ಮಾಯಿ ಶಪಥ
ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ
ದೇಶದಲ್ಲಿಯೇ ಕರ್ನಾಟಕ ನಂ-1 ಸ್ಥಾನ ಮಾಡುವೆ – ಸಿಎಂ ಬೊಮ್ಮಾಯಿ ಶಪಥ
ಯಾದಗಿರಿ: ದೇಶದಲ್ಲೇ ಕರ್ನಾಟಕವನ್ನು ನಂ-1 ಸ್ಥಾನಕ್ಕೆ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಪಥ ಮಾಡಿದರು.
ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ದೇಶವೇ ಕರ್ನಾಟಕದತ್ತ ತಿರುಗಿ ನೋಡಬೇಕು. ಆ ರೀತಿ ಕರ್ನಾಟಕವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ನೆರವಿನಿಂದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವನ್ನಾಗಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ. ಅಭಿವೃದ್ಧಿ ಪಥದಲ್ಲಿ ರಾಜ್ಯವನ್ನು ಕೊಂಡೊಯ್ಯುವೆ. ಬಡವರ ಜೀವನ ಮಟ್ಟ ಸುಧಾರಿಸುವ ಮೂಲಕ ಅವರ ಆದಾಯ ಹೆಚ್ಚಾಗುವಚಿತೆ ಮಾಡುವೆ. ಆಗಾದಾಗ ಮಾತ್ರ ರಾಜ್ಯ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಚಿದ ಅವರು,
.
ದೇವತ್ಕಲ್, ಚಿಕ್ಕನಹಳ್ಳಿ, ಲಕ್ಷ್ಮಿಂಪೂರ ಸೇರಿದಂತೆ ನಾಲ್ಕು ಗ್ರಾಮಗಳನ್ನೊಳಗೊಂಡ 134 ಕೋಟಿ ವೆಚ್ಚದ ಯೋಜನೆಯನ್ನು ಜಾರಿ ತರುವುದಾಗಿ ಘೋಷಿಸಿದ ಅವರು, ಇಂದಷ್ಟೆ ಈ ಯೋಜನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಚಿದು ತಿಳಿಸಿದರು.
ಹಿಂದೆ ದುಡ್ಡೇ ದೊಡ್ಡಪ್ಪ ಎಂಬ ಮಾತಿತ್ತು. ಆದರೆ, ಇಂದು ದುಡಿಯುವವನೇ ದೊಡ್ಡಪ್ಪ ಎಂಬ ಮಾತಾಗಿದೆ. ದುಡಿಯುವ ಕೈಗಳಿಗೆ ಆರ್ಥಿಕ ಸಹಾಯ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಕೈಗೊಂಡಿದ್ದನ್ನು ಗುಣಗಾನ ಮಾಡಿದ ಮುಖ್ಯಮಂತ್ರಿಗಳು, ದೇವತ್ಕಲ್ ಗ್ರಾಮಕ್ಕೆ ಮೂಲಭೂತ ಸೌಲಭ್ಯಕ್ಕಾಗಿ ಒಂದು ಕೋಟಿ ರೂಪಾಯಿಯನ್ನು ನೀಡುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು.
ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಈ ನೆಲಕ್ಕೆ ನೀರು ಕೊಡಲು ನಾವೆಲ್ಲ ಬಂದಿದ್ದೇವೆ. ಡಿಸಿ, ಎಸಿ, ತಹಸೀಲ್ದಾರ ಕಚೇರಿಗೆ ಜನರು ಹೋಗೋದು ಬ್ರಿಟಿಷರ ಕಾಲದ ಪದ್ಧತಿಯಾಗಿತ್ತು. ಆದರೆ, ನಮ್ಮ ಸರ್ಕಾರ ಬಂದ ಮೇಲೆ ಜನರ ಬಳಿಗೆಯೇ ಜಿಲ್ಲಾಧಿಕಾರಿ ಕಳಿಸುವ ಮೂಲಕ ಜನರ ಕಷ್ಟ ಸುಖ ಅರಿಯಲು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪ್ರಾರಂಭಿಸಿದ್ದೇವೆ. ಇದರಿಂದ ಸಾರ್ವಜನಿಕರ ಸಂಕಷ್ಟ ತಿಳಿಯಲು ಸಹಕಾರಿಯಾಗಿದೆ. ಪರಿಣಾಮ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಜನರ ಮನೆ ಬಾಗಿಲಿಗೆ ಹೋಗುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರನ್ನು ಹಾಡಿ ಹೊಗಳಿದ ಸಚಿವರು, ಮೊದಲು 5 ಗಂಟೆಗಳ ಕಾಲ ಗ್ರಾಮವಾಸ್ತವ್ಯ ಮಾಡಲು ರಾಜ್ಯದ ಇತರೆ ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದರು. ಆದರೆ, ದಿನದ 24 ಗಂಟೆಯೂ ಗ್ರಾಮವಾಸ್ತವ್ಯ ಮಾಡಿ ಗ್ರಾಮಗಳ ಸಮಸ್ಯೆಗಳ ಅರಿಯುವುದಾಗಿ ರಾಗಪ್ರಿಯಾ ಅವರು ಮೊದಲ ಬಾರಿಗೆ ಹೇಳಿದ್ದಾಗಿ ಸಚಿವರು ಜಿಲ್ಲಾಧಿಕಾರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಇನಾಮ್ ಭೂಮಿಗಳನ್ನು ಉಳಿಮೆ ಮಾಡುತ್ತಿರುವವರ ರೈತರಿಗೆ ನೀಡುವ ಸಲುವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಶೋಕ್ ಅವರು ಇದೇ ಸಂದರ್ಭದಲ್ಲಿ ಹೇಳಿದರು. ಇತ್ತಿಚಿಗೆ ನಡೆದ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮದಡಿಯಲ್ಲಿ ಸುಮಾರು 60 ಲಕ್ಷ ಕಂದಾಯ ದಾಖಲಾತಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಇದು ನಿಜವಾದ ಬದಲಾವಣೆ ಎಂದರು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ 50 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಯೋಜನೆ ಕೈಗೊಳ್ಳಬೇಕಿದೆ. ಈ ನಿಟ್ಟಿನಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬೂದಿಹಾಳ – ಪೀರಾಪುರ ಯೋಜನೆಯಿಂದಾಗಿ ಜಿಲ್ಲೆಯ ಸುರಪುರ ಹಾಗೂ ಶಹಾಪುರ ತಾಲೂಕಿನ 44,000 ಎಕರೆ ಭೂಮಿಗೆ ನೀರಾವರಿ ಒದಗಿಸಲಿದೆ ಎಂದು ತಿಳಿಸಿದರು.
ಕೃμÁ್ಣ ಯೋಜನೆ ತನ್ನ ಪಾಲಿನ 130 ಟಿಎಂಸಿ ನೀರನ್ನು ರಾಜ್ಯ ಸರ್ಕಾರ ಬಳಸಿಕೊಂಡಿದೆ. ಜೊತೆಗೆ ಕೃಷ್ಣ ನೀರಾವರಿ ಯೋಜನೆಗೆ ಇದುವರೆಗೂ ರೂ 3,500 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಎತ್ತಿನ ಹೊಳೆ ಹಾಗೂ ಮೇಕೆದಾಟು ಯೋಜನೆಗಳನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ ಎಂದರು.
ರಾಜ್ಯದ ಪಶುಸಂಗೋಪನೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಮಾತನಾಡಿ, ರಾಜ್ಯಕ್ಕೆ 60 ಗೋಶಾಲೆ ಹಾಗೂ 100 ಪಶು ಆಸ್ಪತ್ರೆ ಮಂಜೂರು ಮಾಡಿದ್ದು, ನಮ್ಮ ಇಲಾಖೆಯಲ್ಲಿ 400 ಅಧಿಕಾರಿಗಳ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಭಾಷಣದುದ್ದಕ್ಕೂ ಶಾಸಕ ರಾಜೂಗೌಡ ಅವರನ್ನು ಸಚಿವರು ಹಾಡಿ ಹೊಗಳಿದರು. ಮುಖ್ಯಮಂತ್ರಿಗಳು ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಎಲ್ಲಾ ಜಾತಿ, ವರ್ಗಗಳಿಗೆ ನೆರವು ನೀಡಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಕೇಂದ್ರದ ಯೋಜನೆಗಳು ರಾಜ್ಯಕ್ಕೆ ಬರಬೇಕಾದರೆ ರಾಜ್ಯ ಸರ್ಕಾರ ಪ್ರಯತ್ನ ಪಡಬೇಕಾಗುತ್ತದೆ. ಸಿಎಂ ಅವರ ಪರಿಶ್ರಮದಿಂದ ರಾಜ್ಯಕ್ಕೆ ಪ್ರಮುಖ ಯೋಜನೆಗಳು ಬರುತ್ತಿವೆ ಎಂದು ತಿಳಿಸಿದರು.
ಹತ್ತಿಗೂಡೂರು-ಶಹಾಪುರ ಬೈಪಾಸ್ ಗೆ ಕೇಂದ್ರ ಸಾರಿಗೆ ಸಚಿವರು ಒಪ್ಪಿದ್ದು, ರಾಜ್ಯ ಸರ್ಕಾರ ತನ್ನ ಶೇಕಡ 50 ಅನುದಾನ ಹಾಗೂ ಸವಲತ್ತು ಒದಗಿಸಿಕೊಡಬೇಕು ಎಂದು ಸಿಎಂ ಅವರಿಗೆ ಮನವಿ ಮಾಡಿದರು.
ಈ ಭಾಗದ ಸೈನಿಕ ಶಾಲೆ ಸ್ಥಾಪನೆಗೆ ಕುರಿತಂತೆ ಈಗಾಗಲೇ ಕೇಂದ್ರ ಸಚಿವರೊಂದಿಗೆ ಮಾತನಾಡಿದ್ದೇನೆ. ಸಿಎಂ ಆಸಕ್ತಿ ವಹಿಸಿದರೆ ಈ ಭಾಗಕ್ಕೆ ಸೈನಿಕ ಶಾಲೆ ಬರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ನರಸಿಂಹನಾಯಕ (ರಾಜುಗೌಡ) ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿಗಳು ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಗುಣಗಾನ ಮಾಡಿದರು.
ಕೊರೋನಾ ಸಂದರ್ಭದಲ್ಲಿ ಶ್ರಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಗೌರವ ಧನ ಹೆಚ್ಚಳ, ಕುರಿಕಾಯುವವರು ಮೃತಪಟ್ಟರೆ 5 ಲಕ್ಷ ರೂಪಾಯಿ, ಕುರಿ ಹಟ್ಟಿ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಹೀಗೆ ಮುಖ್ಯಮಂತ್ರಿಗಳು ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದು, ಇವರ ಬಜೆಟ್ ಒಂದು ಡಾಕ್ಟರೇಟ್ ಪದವಿ ಮಾಡುವಷ್ಟು ಇದೆ ಎಂದು ಹಾಡಿಹೊಗಳಿದರು.
ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ. ಆರ್ ಆವರು ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಬುರಾವ್ ಚಿಂಚನಸೂರ, ಭೀಮರಾಯನಗುಡಿ ಕೃμÁ್ಣ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ದೇವತ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗಮ್ಮ ಬಸಪ್ಪ ತಳವಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಅಮರೇಶ ನಾಚಿiÀiï್ಕ, ಯಾದಗಿರಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಮುಂತಾದವರು ಇದ್ದರು.