ಪ್ರಮುಖ ಸುದ್ದಿ
ಹೈ ಅಲರ್ಟ್ : ಮಡಿಕೇರಿಯಲ್ಲಿ ಭಾರೀ ಮಳೆ
ಮಡಿಕೇರಿ : ಜುಲೈ 20 ರಿಂದ 23 ರವರೆಗೆ ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದ್ದು ನಾಗರೀಕರು ಹಾಗೂ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಪ್ರಕೃತಿ ವಿಕೋಪದಿಂದಾಗುವ ಸಮಸ್ಯೆ ನಿಯಂತ್ರಣಕ್ಕಾಗಿ ದೂರವಾಣಿ ಸಂಖ್ಯೆ 08272-221077, ವಾಟ್ಸ್ ಆಪ್ ಸಂಖ್ಯೆ 8550001077 ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಸೇವೆಗೆ ಸದಾಕಾಲ ಸಿದ್ಧರಿರುವಂತೆ ಸೂಚಿಸಿದ್ದಾರೆ.