ಪ್ರಮುಖ ಸುದ್ದಿ
ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಎಂಬ ಹೆಸರಿನ ನಾನು…
ದೇವರ ಹೆಸರಿನಲ್ಲಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ
ಬೆಂಗಳೂರು: ಮತ್ತೊಮ್ಮೆ ಹಸಿರು ಶಾಲು ಹೊದ್ದು ವಿಕ್ಟರಿ ಸಿಂಬಲ್ ಪ್ರದರ್ಶಿಸುತ್ತಲೇ ಬಂದ ಯಡಿಯೂರಪ್ಪ ನಾಲ್ಕನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞೆ ವಿಧಿ ಬೋಧಿಸಿದರು. ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ , ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್, ಶಾಸಕ ರೋಷನ್ ಬೇಗ್, ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಯಡಿಯೂರಪ್ಪ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು.