ಪ್ರಮುಖ ಸುದ್ದಿ
ಬಿಜೆಪಿಯಲ್ಲಿ ಸಮಸ್ಯೆ ಇಲ್ಲ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಲ್ಲಿದೆ – ಸಿಎಂ ಬಿಎಸ್ ವೈ
ನವದೆಹಲಿ : ಮಾಜಿ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಕೆಲವರು ಅಸಮಾಧಾನ ಆಗಿದ್ದು ನಿಜ. ಆದರೆ, ಹೈಕಮಾಂಡ್ ಸೂಚನೆ ಮೇರೆಗೆ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದ್ದಾರೆ.
ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿದ್ದು ನಾಳೆ ಬೆಳಗ್ಗೆ 10ಗಂಟೆ ವೇಳೆಗೆ ರಾಜ್ಯಪಾಲರಿಗೆ ನೀಡಲಾಗುವುದು. ಬೆಳಗಾವಿ ಜಿಲ್ಲೆಯ ಮತ್ತೊಬ್ಬರಿಗೆ ಸಂಪುಟದಲ್ಲಿ ಅವಕಾಶ ನೀಡಲಾಗುವುದು ಎಂದಿದ್ದಾರೆ. ಆ ಮೂಲಕ ಬಿಜೆಪಿಯಲ್ಲಿನ ಅಸಮಾಧಾನವನ್ನು ಸರಿಪಡಿಸಲಾಗುವುದು ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.