ಪ್ರಮುಖ ಸುದ್ದಿ
ಕಾಂಗ್ರೆಸ್ಸಲ್ಲಿ ಸಂಚಲನ: ಟಿಕೆಟ್ ಎಂಥವರಿಗೆ ನೀಡ್ತೀವಿ ಅಂದರೆ… ಸಿಎಂ ಹೇಳಿದ್ದಿಷ್ಟು!
ಮೈಸೂರು: ನನ್ನ ಮಾತು ಸ್ಪಷ್ಟವಾಗಿದೆ. ಮೊದಲು ಆಯಾ ವಿಧಾನಸಭಾ ಕ್ಷೇತ್ರದ ಮತದಾರರು ಮತ್ತು ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಕ್ಷೇತ್ರದ ಜನ ಹಾಗೂ ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಸಮರ್ಥ ಅಬ್ಯರ್ಥಿಗಳನ್ನು ಗುರುತಿಸಿ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಸಚಿವರು ಸೇರಿದಂತೆ 20ಜನ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಿಲ್ಲ. ಬದಲಾಗಿ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಂಡು ಹೆಚ್ಚಿನ ಅಬ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಹೊಸತಂತ್ರ ಹೂಡಿದೆ. ಹೊಸಮುಖಗಳನ್ನು ಕಣಕ್ಕಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯುವ ಮೇಘಾ ಪ್ಲಾನ್ ರೂಪಿಸಿದೆ ಎಂಬ ಸುದ್ದಿ ಹಬ್ಬಿದೆ. ಈ ಸುದ್ದಿಗೆ ಪೂರಕವಾಗಿ ಇಂದು ಮೈಸೂರಿನಲ್ಲಿ ಸಿಎಂ ಹೇಳಿಕೆ ನೀಡಿದ್ದು ಕಾಂಗ್ರೆಸ್ ನಾಯಕರಲ್ಲಿ ಸಂಚಲನ ಮೂಡಿಸಿದೆ.