Homeಜನಮನಪ್ರಮುಖ ಸುದ್ದಿ
ಸಿಎಂ ವಿರುದ್ಧ ಮತ್ತೊಂದು ಆರೋಪ: ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಕೆ
![](https://vinayavani.com/wp-content/uploads/2024/08/images-1-6-780x470.jpg)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ನಿಲ್ಲುವಂತೆ ಕಾಣ್ತಿಲ್ಲ. ಮುಡಾ ಹಣವನ್ನು ವರುಣ ಕ್ಷೇತ್ರದ (Varuna Constituency) ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಸಿಎಂ ಮೌಖಿಕ ಆದೇಶದ ಮೇರೆಗೆ ಕಾನೂನು ಮೀರಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರುಕೊಟ್ಟಿದ್ದಾರೆ. ಪ್ರಾಧಿಕಾರದ ಸಭೆಯ ಕಡತದಲ್ಲೇ ಈ ವಿಚಾರ ಉಲ್ಲೇಖವಾಗಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದರೂ ಮುಡಾದ 450 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಸೂಚಿಸಬೇಕೆಂದು ಎಂದು ನಟರಾಜ್ ಕೋರಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೆ.5ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.