Homeಜನಮನಪ್ರಮುಖ ಸುದ್ದಿ
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಇಂದು ಬೃಹತ್ ಹೋರಾಟ ನಡೆಸುತ್ತಿದೆ.
ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೃಹತ್ ಹೋರಾಟ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.