ಪ್ರಮುಖ ಸುದ್ದಿ
ಜೆಡಿಎಸ್ ಗೆಲುವಿನ ಸಂಖ್ಯೆಯ ಭವಿಷ್ಯ ಹೇಳಿದ ಸಿಎಂ ಸಿದ್ಧರಾಮಯ್ಯ?
ಮೈಸೂರು : ಜನತಾ ದಳ ಜಾತ್ಯಾತೀತ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೂ ಗೊತ್ತಿದೆ. ಅವರ ಮಗ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯದ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಗೊತ್ತಿದೆ. ಜೆಡಿಎಸ್ ಕೇವಲ 25ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ.
ನಗರದ ಮಹಾರಾಜ ಮೈದಾನದಲ್ಲಿ ಜನಾಶೀರ್ವಾದ ಯಾತ್ರೆಯನ್ನುದ್ದೇಶಿಸಿ ಸಿಎಂ ಸಿದ್ಧರಾಮಯ್ಯ ಮಾತನಾಡಿದರು. ಮಗ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂಬ ದೇವೇಗೌಡರ ಆಸೆ ಈಡೇರುವುದಿಲ್ಲ ಎಂದು ವ್ಯಂಗ್ಯವಾಡಿದರು. ಅಧಿಕಾರಿ ಹಿಡಿಯುವುದಂತೂ ಕನಸಿನ ಮಾತು. ದಲಿತ ಅಥವಾ ಅಲ್ಪಸಂಖ್ಯಾತ ಸಮುದಾಯದವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಘೋಷಿಸುವ ಜೆಡಿಎಸ್ ಕುಮಾರಸ್ವಾಮಿ ಬದಲಿಗೆ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದು ಘೋಷಿಸಲಿ ಎಂದು ಸವಾಲೆಸೆದರು.