ಪ್ರಮುಖ ಸುದ್ದಿ
ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಳ್ಳುತ್ತಾರೆ – ಸಿಎಂ ವಾಗ್ಬಾಣ
ಮೈಸೂರು: ಮೈಸೂರಿನಲ್ಲಿ ನಡೆದ 83ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಸಮ್ಮೇಳನಾದ್ಯಕ್ಷ ಚಂದ್ರಶೇಖರ್ ಪಾಟೀಲ್ ಅವರು ಜಾತ್ಯಾತೀತ ಪಕ್ಷಕ್ಕೆ ಮತ ನೀಡಿ ಎಂದಿದ್ದಾರೆ ಅಷ್ಟೇ. ಆದರೆ, ಭಾರತೀಯ ಜನತಾ ಪಕ್ಷದವರು ಮಾತ್ರ ಚಂಪಾ ವಿರುದ್ಧ ಮುಗಿ ಬಿದ್ದಿದ್ದಾರೆ. ಆ ಮೂಲಕ ತಾವೇ ನಾವು ಕೋಮುವಾದಿಗಳು ಎಂದು ಸಾರಿಕೊಳ್ಳುತ್ತಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಾಹಿತಿ ಚಂಪಾ ಅವರ ಹೇಳಿಕೆಯನ್ನೂ ಬಿಜೆಪಿಯವರು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ಅಗತ್ಯವಿರಲಿಲ್ಲ ಎಂದಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕೇಂದ್ರದಿಂದ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.