ಪ್ರಮುಖ ಸುದ್ದಿ
ಪ್ರವಾಹ ಪೀಡಿತ ರಾಜ್ಯಕ್ಕೆ ಶೀಘ್ರ ಅನುದಾನ ನೀಡಿ : ಪಿಎಂಗೆ ಸಿಎಂ ಮನವಿ
ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಪೀಡಿತ ಕರ್ನಾಟಕಕ್ಕೆ ಹೆಚ್ಚಿನ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ ಜೋಷಿ, ಜಗದೀಶ್ ಶೆಟ್ಟರ್, ಆರ್.ಅಶೋಕ, ಗೋವಿಂದ ಕಾರಜೋಳ್ ಉಪಸ್ಥಿತರಿದ್ದರು.