Homeಪ್ರಮುಖ ಸುದ್ದಿಮಹಿಳಾ ವಾಣಿ

ಮೊಸರಿಗೆ ಒಂದು ಚಮಚ ಇದನ್ನು ಬೆರೆಸಿ ಸೇವಿಸಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಸುಲಭವಾಗಿ ಕರಗುವುದು !

High cholesterol control tips : ಇತ್ತೀಚಿನ ದಿನಗಳಲ್ಲಿ ನಾವು ಅನುಸರಿಸುತ್ತಿರುವ ತಪ್ಪು ಜೀವನಶೈಲಿ ಮತ್ತು ಸೇವಿಸುವ ಆಹಾರ ನಮ್ಮನ್ನು ಕಾಯಿಲೆಗಳತ್ತ ತಳ್ಳುತ್ತಿದೆ.ಇತ್ತೀಚಿನ ದಿನಗಳಲ್ಲಿ ಯುವಕರು ಕೂಡಾ ಕೊಲೆಸ್ಟ್ರಾಲ್ ಸಮಸ್ಯೆಯನ್ನು ಎದುರಿಸುವಂತಾಗಿದೆ.ದೇಹದಲ್ಲಿ ಹೆಚ್ಚಾಗುತ್ತಿರುವ ಕೊಲೆಸ್ಟ್ರಾಲ್ ಪ್ರಮಾಣವು ಹೃದ್ರೋಗದಂತಹ ಗಂಭೀರ ಕಾಯಿಲೆಗಳ ಕಡೆಗೆ ನಿಮ್ಮನ್ನು ತಳ್ಳಬಹುದು.ಆದ್ದರಿಂದ, ಸರಿಯಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ,ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಬಹುದು.

ಇಸಾಬ್ಗೋಲ್ :
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ನಿಯಂತ್ರಿಸುವ ಸಲುವಾಗಿ ಅನೇಕ ಮನೆಮದ್ದುಗಳನ್ನು ಪ್ರಯತ್ನಿಸಬಹುದು.ಅವುಗಳಲ್ಲಿ ಅತ್ಯಂತ ಪರಿಣಾಮಕಾರಿಯಾದ ಮನೆಮದ್ದು ಎಂದರೆ ಇಸಾಬ್ಗೋಲ್.ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.ಇದರ ಸೇವನೆ ಮೂಲಕ ನಮ್ಮ ದೇಹದ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ತೆಗೆದುಹಾಕಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ.

ಇಸಾಬ್ಗೋಲ್ ಎಂದರೇನು ? :
ಇಸಾಬ್ಗೋಲ್ ವಿಶೇಷ ಅಂಶಗಳನ್ನು ಒಳಗೊಂಡಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳಲು ಕರುಳಿಗೆ ಬಿಡುವುದಿಲ್ಲ. ಅದರ ಸಹಾಯದಿಂದ ಕೊಲೆಸ್ಟ್ರಾಲ್ ದೇಹದಲ್ಲಿ ಸಂಗ್ರಹವಾಗುವ ಬದಲು ಮಲದ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೇಹದಿಂದ ಹೊರ ಹಾಕಲು ಸಹಾಯ ಮಾಡುತ್ತದೆ.

ಇದನ್ನು ಮೊಸರಿನ ಜೊತೆ ಸೇವಿಸಿದರೆ ಪ್ರಯೋಜನ :
ಇಸಾಬ್ಗೋಲ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರ ಆರೋಗ್ಯ ಪ್ರಯೋಜನ ಸಿಗುವುದು. ಇದನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ ಕುಡಿಯುವ ಪದ್ದತಿಯೂ ಇದೆ. ಆದರೆ, ಮೊಸರಿನೊಂದಿಗೆ ಇಸಾಬ್ಗೋಲ್ ಸೇವಿಸಿದರೆ,ಅದು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು ಎನ್ನುವುದು ಅಧ್ಯಯನದ ಮೂಲಕ ಸಾಬೀತಾಗಿದೆ.

ಮೊಸರು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಮಾತ್ರವಲ್ಲ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುವ ಹಲವಾರು ಇತರ ಅಂಶಗಳು ಕೂಡಾ ಇದರಲ್ಲಿ ಕಂಡುಬರುತ್ತವೆ.ಆದ್ದರಿಂದ ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ತಾಜಾ ಮೊಸರಿಗೆ ಇಸಾಬ್ಗೋಲ್ ಸೇರಿಸಿ ಅದನ್ನು ಸೇವಿಸಬೇಕು. ಇಸಾಬ್ಗೋಲ್ ಅನ್ನು ಮೊಸರಿನೊಂದಿಗೆ ವಾರಕ್ಕೆ ಎರಡರಿಂದ ಮೂರು ಬಾರಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎನ್ನುವುದು ಅನೇಕ ಅಧ್ಯಯನಗಳಿಂದ ಕಂಡು ಕೊಂಡಿರುವ ಸತ್ಯ.

Related Articles

Leave a Reply

Your email address will not be published. Required fields are marked *

Back to top button