ಪ್ರಮುಖ ಸುದ್ದಿ
ಸಿಎಂ ಯಡಿಯೂರಪ್ಪಗೆ ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅಭಿನಂದನೆ!
ಬೆಂಗಳೂರು: ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಆಫ್ ಕರ್ನಾಟಕ ಹೆಸರಿನ ಟ್ವೀಟರ್ ಅಕೌಂಟಿನಲ್ಲಿ ಚಿತ್ರ ಮತ್ತು ಮಾಹಿತಿ ಶೇರ್ ಮಾಡಲಾಗಿದೆ.
ಸಾಹಿತಿ ಕಂಬಾರ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿರುವ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಸಿದ್ಧರಾಮಯ್ಯ ಅವರು ಸಿಎಂ ಆದ ಸಂದರ್ಭದಲ್ಲಿ ಸಾಹಿತಿಗಳು, ಚಿಂತಕರ ಮನೆಗಳಿಗೆ ಭೇಟಿ ನೀಡಿ ಸಲಹೆ ಪಡೆದಿದ್ದರು. ಆದರೆ, ಕಂಬಾರ ಅವರೇ ಸಿಎಂ ಬಳಿಗೆ ತೆರಳಿ ಅಭಿನಂದನೆ ಸಲ್ಲಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.