Homeಪ್ರಮುಖ ಸುದ್ದಿಮಹಿಳಾ ವಾಣಿ
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ: ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ..?
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿದೆ.
ಈ ಹಿನ್ನೆಲೆರಾಜ್ಯ ಸರ್ಕಾರ ತಂದಿರುವ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಮೂಡಿದೆ. ಈ ಬಾರಿಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿಯಲಿದ್ದು, 15 ರಿಂದ 18 ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆ ಹೊಂದಿತ್ತು. ಆದರೆ ಕೇವಲ 9 ಕ್ಷೇತ್ರಗಳಲ್ಲಿ ಮಾತ್ರ ಗೆದ್ದು ನಿರಾಸೆ ಅನುಭವಿಸಿದೆ. ಈ ಹಿನ್ನೆಲೆ ಗ್ಯಾರಂಟಿ ಯೋಜನೆ ರದ್ದಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.