ಪ್ರಮುಖ ಸುದ್ದಿ

‘ಮೋದಿ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ಬಂದಿಲ್ಲ’- ಜೈರಾಮ್ ರಮೇಶ್

ನವದೆಹಲಿ:  ಇಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ನಾಯಕರಿಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭಕ್ಕೆ ಅಂತರರಾಷ್ಟ್ರೀಯ ನಾಯಕರನ್ನು ಮಾತ್ರ ಆಹ್ವಾನಿಸಲಾಗಿದೆ. ಆದರೆ ನಮ್ಮ ಪಕ್ಷದ ನಾಯಕರಿಗೆ ಯಾವುದೇ ಆಹ್ವಾನ ಬಂದಿಲ್ಲ. ಪ್ರಮಾಣ ಸ್ವೀಕರಿಸುವ ವ್ಯಕ್ತಿ ತನ್ನ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಮೋದಿ ಅವರ ಹೆಸರಿನಲ್ಲಿ ಜನಾದೇಶವನ್ನು ಕೇಳಲಾಯಿತು. ಆದರೆ ಅದನ್ನು ಪಡೆಯುವಲ್ಲಿ ಅವರು ವಿಫಲರಾಗಿದ್ದಾರೆ. ಈ ಪ್ರಮಾಣ ವಚನದ ನಾಟಕವನ್ನು ಏಕೆ ಮಾಡುತ್ತಿದ್ದಾರೆ ಎಂಬುವುದು ನಮಗೆ ಅರ್ಥವಾಗುತ್ತಿಲ್ಲ ಎಂದರು.

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರತಿಕ್ರಿಯೆ ನೀಡಿ, ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಈವರೆಗೆ ನಮಗೆ ಆಹ್ವಾನ ಬಂದಿಲ್ಲ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಇಂಡಿಯಾ ಒಕ್ಕೂಟ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button