ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ಹಣ ಖಾತೆಗೆ ಜಮಾ
ಮಧ್ಯಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ನಾಯಕ ಕಾಂತಿಲಾಲ್ ಭುರಿಯಾ ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದಾರೆ.
ಪಕ್ಷವು ಅಧಿಕಾರಕ್ಕೆ ಬಂದರೆ ಪಕ್ಷದ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂ. ಜಮಾ ಮಾಡಲಾಗುವುದು. ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದ್ದು, ಇಬ್ಬರು ಪತ್ನಿಯರಿರುವವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದರು.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಜಿತು ಪಟ್ವಾರಿ ಅವರ ಸಮ್ಮುಖದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ಕಾಂಗ್ರೆಸ್‌ನ ಪ್ರಣಾಳಿಕೆಯಂತೆ ಮಹಿಳೆಯರು ಬಡತನ ರೇಖೆಗಿಂತ ಕೆಳಗಿರುವ ಭಾಗದಿಂದ ಹೊರಬರುವವರೆಗೆ ಮಹಾಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 8,500 ರೂ. ನೀಡಲಾಗುವುದು. ಭುರಿಯಾ ಅವರು ಮಧ್ಯಪ್ರದೇಶದ ಅರಣ್ಯ ಸಚಿವ ನಗರ್ ಸಿಂಗ್ ಚೌಹಾಣ್ ಅವರ ಪತ್ನಿ ಅನಿತಾ ಚೌಹಾಣ್ ವಿರುದ್ಧ ರತ್ಲಾಮ್‌ನಲ್ಲಿ ಕಣಕ್ಕಿಳಿದಿದ್ದಾರೆ. ಮೇ 13 ರಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ರತ್ಲಾಮ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಫಲಿತಾಂಶಗಳು ಜೂನ್ 4 ರಂದು ಪ್ರಕಟವಾಗಲಿದೆ.