ಪ್ರಮುಖ ಸುದ್ದಿ
ರಾಜ್ಯದಲ್ಲಿ ಕೊರೊನಾರ್ಭಟಃ 8 ಜಿಲ್ಲೆಗಳಲ್ಲಿ ಬಾರ್, ರೆಸ್ಟೋರೆಂಟ್, ಜಿಮ್, ಸ್ವಿಮ್ಮಿಂಗ್ ಫೂಲ್ ಬಂದ್..!
ರಾಜ್ಯದಲ್ಲಿ ಕೊರೊನಾರ್ಭಟಃ 8 ಜಿಲ್ಲೆಗಳಲ್ಲಿ ಬಾರ್, ರೆಸ್ಟೋರೆಂಟ್, ಜಿಮ್, ಸ್ವಿಮ್ಮಿಂಗ್ ಫೂಲ್ ಬಂದ್..!
ವಿವಿ ಡೆಸ್ಕ್ಃ ರಾಜ್ಯದಲ್ಲಿ ಎರಡನೇ ಮಹಾಮಾರಿ ಕೊರೊನಾ ಆರ್ಭಟಿಸುತ್ತಿದ್ದು, ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಏಪ್ರೀಲ್ 20 ರವರೆಗೆ ಈ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯ ಈ ಎಂಟು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಪತ್ತೆಯಾಗುತ್ತಿರುವ ಹಿನ್ನೆಲೆ, ಅದಕ್ಕೆ ಕಡಿವಾಣ ಹಾಕುವ ಉದ್ದೆಶದಿಂದ ಬೆಂಗಳೂರು ನಗರ, ಬೆಂಗಳೂರ ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ, ಕಲ್ಬುರ್ಗಿ, ಧಾರವಾಡ, ಉಡುಪಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಾರ್, ರೆಸ್ಟೋರೆಂಟ್, ಪಬ್, ಕ್ಲಬ್, ಸ್ವಿಮ್ಮಿಂಗ್ ಫೂಲ್, ಜಿಮ್ ಕೋವಿಡ್ -19 ಹಿನ್ನೆಲೆ ರಾಜ್ಯ ಸರ್ಕಾರ ಸೂಚಿಸಿದ ಮಾರ್ಗಿಸೂಚಿ ಅನ್ವಯ ಸಂಪೂರ್ಣ ಬಂದ್ ಆಗಲಿವೆ.
ಅಲ್ಲದೆ 1 ನೇ ತರಗತಿಯಿಂದ 9 ತರಗತಿವರೆಗೆ ಕ್ಲಾಸ್ ಗಳು ಸಹ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.