ಪ್ರಮುಖ ಸುದ್ದಿ
BREKING NEWS- ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ, 24 ಗಂಟೆಯಲ್ಲಿ 14 ಮಂದಿ ಬಲಿ, 523 ಮಂದಿಗೆ ಸೋಂಕು
ಬ್ರೆಕಿಂಗ್ ನಿವ್ಸ್ಃ ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ, 24 ಗಂಟೆಯಲ್ಲಿ 14 ಮಂದಿ ಬಲಿ, 523 ಮಂದಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದೆ. ಮಹಾಮಾರಿ ಕೊರೊನಾ ಸೋಂಕಿಗೆ 24 ಗಂಟೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ ಸಾವಿನ ಸಂಖ್ಯೆ 37,845 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ. 29,29,008 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸದ್ಯ 11,926 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ 523 ಜನರಿಗೆ ಸೋಂಕು ತಗುಲಿದ್ದು, 14 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಳೆದ 24 ಗಂಟೆಯಲ್ಲಿ 575 ಜನ ಗುಣಮುಖರಾಗಿದ್ದು, ಸೋಂಕಿತರ ಸಂಖ್ಯೆ 29,78,808 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿಯೇ ಹೊಸದಾಗಿ 201 ಮಂದಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 238 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.