ಪ್ರಮುಖ ಸುದ್ದಿ
ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಚಿಕ್ಕಮಗಳೂರಃ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಪೋಟ
ಚಿಕ್ಕಮಗಳೂರಃ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟವಾಗಿದ್ದು, ಓರ್ವ ಶಿಕ್ಷಕ ಮತ್ತು 1೦ ಜನ ವಿದ್ಯಾರ್ಥಿಗಳು ಸೇರಿದಂತೆ 11 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರಿಗೆ ಮನೆಯಲ್ಲಿಯೇ ಐಸೋಲೆಷನ್ ಮಾಡಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಉಲ್ಬಣ ಹಿನ್ನೆಲೆ ಶಾಲೆಯನ್ನು ಒಂದು ವಾರ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ರಮೇಶ ಆದೇಶ ಹೊರಡಿಸಿದ್ದಾರೆ.
ಕಳೆದ ವಾರ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು.
ಕೊಪ್ಪ ತಾಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಉಲ್ಬಣಗೊಂಡಿತ್ತು. ಜಿಲ್ಲೆಯಲ್ಲಿ ಕೊರೊನಾ ಜಾಸ್ತಿಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ.