ಜನಮನಪ್ರಮುಖ ಸುದ್ದಿ
ಸುಪ್ರೀಂಕೋರ್ಟ್ ತೀರ್ಪು : ಯಾರಿಗೆ ವರ? ಯಾರಿಗೆ ಶಾಪ?
ನವದೆಹಲಿ: ಅತೃಪ್ತರ ಶಾಸಕರ ರಾಜೀನಾಮೆ ಮತ್ತು ಅನರ್ಹತೆಯ ಕುರಿತು ಸ್ಪೀಕರ್ ಕಾಲಮಿತಿಯಲ್ಲಿ ನಿರ್ಧಾರ ಪ್ರಕಟಿಸಬೇಕು ಎಂದು ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ. ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ಪ್ರಕಟಿಸಿದೆ.
ಸ್ಪೀಕರ್ ತೀರ್ಮಾನ ಕೈಗೊಳ್ಳುವವರೆಗೆ ರಾಜೀನಾಮೆ ಸಲ್ಲಿಸಿದ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸುವಂತೆ ಒತ್ತಾಯಿಸುವಂತಿಲ್ಲ. ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆಯ ಕುರಿತು ಸ್ಪೀಕರ್ ಕಾಲಮಿತಿಯಲ್ಲಿ ನಿರ್ಧಾರ ಪ್ರಕಟಿಸಬೇಕು. ನಿರ್ಧಾರ ಕೈಗೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಕೋರ್ಟ್ ಸ್ಪಷ್ಟವಾಗಿ ಹೇಳಿದೆ.