ಪ್ರಮುಖ ಸುದ್ದಿ
ಗರೀಬಿ ಹಠಾವೋ ಮಾಡಿದ್ದರೆ ಕ್ಯಾಂಟೀನ್ ಸ್ಥಾಪಿಸುವ ಅವಶ್ಯಕತೆ ಏನಿತ್ತು.? ಸಿಟಿ ರವಿ ಪ್ರಶ್ನೆ
ಇಂದಿರಾ ಗಾಂಧಿ ಗರೀಬಿ ಹಠಾವೋ ಮಾಡಿದ್ದರೆ ಕ್ಯಾಂಟೀನ್ ಸ್ಥಾಪಿಸುವ ಅವಶ್ಯಕತೆ ಏನಿತ್ತು.? ಸಿಟಿ ರವಿ ಪ್ರಶ್ನೆ
vv desk-ರಾಷ್ಟ್ರವಾದಿ ವೀರ್ ಸವರ್ಕರ್ ಅವರನ್ನು ನಿಂದಿಸುವ ಕಾಂಗ್ರೆಸ್ಸಿಗರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಸರ್ವಾಧಿಕಾರಿಯನ್ನು ನಾಡಿನ ಅಧಿ ದೇವತೆಯಂತೆ ಪೂಜಿಸುತ್ತಿದ್ದಾರೆ. ಇಂದಿರಾ ಗಾಂಧಿಯವರು ನಿಜವಾಗಲೂ ಗರೀಬಿ ಹಟಾವೋ ಮಾಡಿದ್ದಿದ್ದರೆ “ಇಂದಿರಾ ಕ್ಯಾಂಟೀನ್” ಸ್ಥಾಪಿಸುವ ಅವಶ್ಯಕತೆ ಏನಿತ್ತು? ಕಾಂಗ್ರೆಸ್ಸಿಗರು ಉತ್ತರಿಸುವರೇ.? ಎಂದು ಸಿಟಿ ರವಿ ಅವರು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.
ಅಲ್ಲದೆ ತಮಗೆ ತಾವೇ ಭಾರತ ರತ್ನ ಕರುಣಿಸಿಕೊಂಡ ನೆಹರು ಮತ್ತು ಇಂದಿರಾ ಗಾಂಧಿಯವರು, ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ಅವರು ಬದುಕಿರುವವರೆಗೂ ಅವರನ್ನು ವಿರೋಧಿಸಿದರು. ಸಂವಿಧಾನ ಶಿಲ್ಪಿಯನ್ನು ವಿರೋಧಿಸಿದ ಕಾಂಗ್ರೆಸ್ ಸಂಸ್ಕೃತಿ ಜಗತ್ತಿಗೇ ತಿಳಿದಿದೆ. ಕಾಂಗ್ರೆಸ್ಸಿಗರು ಅಪಾತ್ರರ ಪೂಜೆ ಮಾಡಿಕೊಂಡಿರಲಿ ನಮ್ಮ ಅಭ್ಯಂತರವಿಲ್ಲ ಎಂದು ಅವರು ಛೇಡಿಸಿದ್ದಾರೆ