ಕ್ಯಾಂಪಸ್ ಕಲರವ
ಯಾದಗಿರಿಯಲ್ಲಿ ಆರಂಭ ಸೈಬರ್ ಪೊಲೀಸ್ ಠಾಣೆ
ಸೈಬರ್ ಅಪರಾಧ ಪೊಲೀಸ್ ಠಾಣೆ ಕಾರ್ಯಾರಂಭ
ಯಾದಗಿರಿಃ ಡಿಸೆಂಬರ್ 22 ಯಾದಗಿರಿಯ ಜಿಲ್ಲಾ ಪೊಲೀಸ್ ಕಚೇರಿ ಕಟ್ಟಡದಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆ ಹೊಸದಾಗಿ ಕಾರ್ಯಾರಂಭ ಮಾಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.
ಸೈಬರ್ ಅಪರಾಧಗಳು ಸೇರಿದಂತೆ ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದೂರುಗಳಿದ್ದಲ್ಲಿ ಸಾರ್ವಜನಿಕರು ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಬಂದು ದೂರು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ನಾಗರಿಕರು ಸಾಮಾಜಿಕ ಜಾಲತಾಣದಲ್ಲಿ ಸದಾ ಒಂದಿಲ್ಲೊಂದು ಸುದ್ದಿ ಬಿಂಬಿಸಿ ಮಜಾ ತೆಗೆದುಕೊಳ್ಳುವ ಖದೀಮರು ಇನ್ನೂ ಎಚ್ಚೆತ್ತುಕೊಳ್ಳುವದು ಉತ್ತಮ.