Homeಜನಮನಪ್ರಮುಖ ಸುದ್ದಿ
ಎತ್ತಿನಹೊಳೆ ಯೋಜನೆ 2027ರ ವೇಳೆಗೆ ಪೂರ್ಣಗೊಳ್ಳಲಿದೆ: ಡಿಕೆ ಶಿವಕುಮಾರ್
ಎತ್ತಿನಹೊಳೆ ಯೋಜನೆ 2027ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ, ಯೋಜನೆಯ ಮೊದಲ ಹಂತದಲ್ಲಿ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತಿದೆ. ಮೊದಲ ಹಂತದ ಕಾಮಗಾರಿಗಳನ್ನು ಸೆಪ್ಟೆಂಬರ್ 6ರಂದು ಯೋಜನೆಯ ಪ್ರಮುಖ ಜಾಗದಲ್ಲಿ ನೀರನ್ನು ಮೇಲಕ್ಕೆ ಎತ್ತುವ ಪಂಪ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.