ಪ್ರಮುಖ ಸುದ್ದಿ
ದಲಿತರು ಮಖ್ಯಮಂತ್ರಿ ಆಗಬೇಕನ್ನೋದು ನನ್ನಾಸೆ -ಸಿಎಂ ಸಿದ್ಧರಾಮಯ್ಯ
ಕೊಪ್ಪಳ: ನಾನು ದಲಿತರ ಪರವಾಗಿದ್ದೇನೆ. ದಲಿತರು ಮುಖ್ಯಮಂತ್ರಿ ಆಗಬೇಕು ಅನ್ನೋದು ನನ್ನ ಆಸೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ನಗರದಲ್ಲಿ ನಡೆದ ಸಮಾವೇಶಕ್ಕೆ ಚಾಲನೆ ನೀಡಿದ ಬಳಿಕ ಸಿಎಂ ಸಭೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಗಾದಿಗೇರಬೇಕು ಅನ್ನೋದು ನನ್ನಾಸೆ ಆಗಿದೆ ಎಂದಿದ್ದಾರೆ.
ಆದರೆ, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯದ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅದರ ಬದಲು ಜೆಡಿಎಸ್ ದಲಿತರನ್ನೇ ಯಾಕೆ ಮುಖ್ಯಮಂತ್ರಿಯನ್ನಾಗಿ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ನಾನು ದೇವೇಗೌಡರ ಜೊತೆಗೆ ಕೆಲಸ ಮಾಡಿದ್ದೇನೆ. ಅವರ ಸತ್ಯ ನನಗೂ ಗೊತ್ತಿದೆ ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ.