Homeಪ್ರಮುಖ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renukaswamy Murder) ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Darshan Arrested) ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. “ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್‌ ಕಸ್ಟಡಿಗೆ ನೀಡುವ ಅಗತ್ಯವಿಲ್ಲ” ಎಂದರು. ಆದರೆ, “ರೇಣುಕಾಸ್ವಾಮಿ ಮೊಬೈಲ್‌ ರಿಕವರಿ ಆಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ದರ್ಶನ್, ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದರು.

 

 

 

Related Articles

Leave a Reply

Your email address will not be published. Required fields are marked *

Back to top button