Homeಪ್ರಮುಖ ಸುದ್ದಿ
ರೇಣುಕಾಸ್ವಾಮಿ ಹತ್ಯೆ ಕೇಸ್: ಇಂದು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ.
ಆರೋಪಿಗಳಾದ ದರ್ಶನ್, ವಿನಯ್, ಧನರಾಜ್, ಪ್ರದೋಶ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ಆರೋಪಿಗಳನ್ನು ಮತ್ತೆ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ಇನ್ನು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಪೊಲೀಸರು ತಯಾರಿ ನಡೆಸಿದ್ದು, ಈ ನಾಲ್ವರಿಗೂ ಜೈಲು ಫಿಕ್ಸ್ ಎನ್ನಲಾಗುತ್ತಿದೆ.
ಆರೋಪಿಗಳನ್ನು ಈಗಾಗಲೇ 3 ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಧ್ಯಾಹ್ನ 3 ಗಂಟೆಯ ಬಳಿಕ ಪೊಲೀಸ್ ಠಾಣೆಯಿಂದ ಕೋರ್ಟ್ಗೆ ಆರೋಪಿಗಳನ್ನು ಕರೆದೊಯ್ಯಲಾಗುತ್ತದೆ.ಇನ್ನು ನಟ ದರ್ಶನ್ ಮನೆಯಲ್ಲಿ ಸಿಕ್ಕ 40 ಲಕ್ಷ ರೂಪಾಯಿ ಹಣದ ಬಗ್ಗೆ ವಿಚಾರಿಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದರು.