ಖರೀದಿ ಕೇಂದ್ರಗಳಲ್ಲಿ ರೈತರ ದಾಖಲಾತಿ ಮಾಹಿತಿ ಸರಿಯಾಗಿ ಭರ್ತಿ ಮಾಡಿ
ಖರೀದಿ ಕೇಂದ್ರಗಳಲ್ಲಿ ರೈತರ ದಾಖಲಾತಿ ಮಾಹಿತಿ ಸರಿಯಾಗಿ ಭರ್ತಿ ಮಾಡಿ
ಯಾದಗಿರಿ:- ಖರೀದಿ ಕೇಂದ್ರದಲ್ಲಿ ನಿರ್ವಹಣೆ ಮಾಡಿ ಹಾಗೂ ಖರೀದಿ ಕೇಂದ್ರಗಳಲ್ಲಿ ರೈತರ ದಾಖಲಾತಿ ಮಾಹಿತಿಯನ್ನು ಸರಿಯಾಗಿ ತಂತ್ರಾಂಶದಲ್ಲಿ ನಮೂದಿಸಿ ಅರ್ಹ ರೈತರಿಗೆ ಬೆಳೆಯ ಹಣ ತಲುಪುವಂತೆ ಮಾಡಿ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಅಕ್ಟೋಬರ 30ರ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ನಡೆದ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿಕಾಳು ಮತ್ತು ಹತ್ತಿ ಖರೀದಿ ಕೇಂದ್ರಗಳ ಪ್ರಾರಂಭಿಸುವ ಸಂಬಂಧಿಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾನಾಡಿದರು.
ಖರೀದಿ ಕೇಂದ್ರದಲ್ಲಿ ಸರಿಯಾದ ಸಿಬ್ಬಂಮದಿ ನಿಯೋಜನೆ ಮಾಡಿ ಹಾಗೂ ಸಿಬ್ಬಂದಿಗಳಿಗೆ ಮುಂಚಿತವಾಗಿ ರೈತರ ದಾಖಲಾತಿಗಳನ್ನು ನಮೂದಿಸಿವ ಬಗ್ಗೆ ತರಬೇತಿ ನೀಡಿಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಒಟ್ಟು 5 ಹತ್ತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಇದರಲ್ಲಿ ಶಹಾಪುರ ತಾಲ್ಲೂಕಿನಲ್ಲಿ 3, ಯಾದಗಿರಿ ತಾಲ್ಲೂಕಿನಲ್ಲಿ 2 ಖರೀದಿ ಕೇಂದ್ರ ಪ್ರಾರಂಭಿಸಿ ಈ ಖರೀದಿ ಕೇಂದ್ರಗಳಲ್ಲಿ ಒಟ್ಟು 4783 ರೈತರಿಂದ 242235ಲಕ್ಷ ಕ್ವಿಂಟಲ್ ಹತ್ತಿಯನ್ನು ಸರಕಾರದ ಬೆಂಬಲ ಬೆಲೆ 5550 ರೂ ರಂತೆ ಪ್ರತಿ ಕ್ವಿಂಟಾಲ್‍ಗೆ ಖರೀದಿಸಲಾಗಿತ್ತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಭೀಯರಾಯ ಕಲ್ಲೂರ ಸಭೆಯಲ್ಲಿ ಮಾಹಿತಿ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಹತ್ತಿ ಬಿತ್ತನೆ ಕ್ಷೇತ್ರ 152 ಸಾವಿರ ಹೆಕ್ಟೇರ್‍ಗಳಷ್ಟು ಇದ್ದು, ಪ್ರತಿ ಹೆಕ್ಟೇರ್‍ಗೆ ಹತ್ತಿ ಇಳುವರಿ 6 ರಿಂದ 7 ಕ್ವಿಂಟಾಲ್ ಬರಬಹುದು ಎಂದು ಅಂದಾಜಿಸಿಲಾಗಿದೆ ಎಂದು ಅವರು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರÀಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 5ರಿಂದ 6 ಹತ್ತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಹಾಗೂ ಜಿಲ್ಲೆಯಲ್ಲಿ ಯಾವ ತಾಲ್ಲೂಕಿನಲ್ಲಿ ಹೆಚ್ಚು ರೈತರಿಂದ ಬೇಡಿಕೆ ಇರುವ ಸ್ಥಳದಲ್ಲಿ ಹಾಗೂ ಹತ್ತಿ ಬೆಳೆಯ ಕ್ಷೇತ್ರ ಹೆಚ್ಚು ಬೆಳೆಯುವ ತಾಲ್ಲೂಕುಗಳಲ್ಲಿ ಮತ್ತು ರೈತರಿಗೆ ಅನಕೂಲವಾಗುವಂತೆ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಬೇಕು, ಹತ್ತಿ ಬೆಳೆಗೆ ನೀರು ಸಿಂಪಡಣೆ ಮಾಡಿ ಮಾರುಕಟ್ಟೆಗೆ ತರುವುದನ್ನು ತಪ್ಪಿಸಿ ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಒಟ್ಟು 34 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು, 16403 ರೈತರಿಂದ 1.52 ಸಾವಿರ ಕ್ವಿಂಟಾಲ್‍ನಷ್ಟು ತೊಗರಿ ಖರೀದಿಸಲಾಗಿತ್ತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಭೀಯರಾಯ ಕಲ್ಲೂರ ಸಭೆಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 108000 ಸಾವಿರ ಹೆಕ್ಟೇರ್ ತೊಗರಿ ಬಿತ್ತನೆಯಾಗಿದ್ದು, ಪ್ರತಿ ಹೆಕ್ಟೇರ್‍ಗೆ 5ರಿಂದ 6 ಕ್ವಿಂಟಾಲ್ ಇಳುವರಿ ಬರುವ ನಿರೀಕ್ಷೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ತೊಗರಿ ಬೆಳೆಯ ಕ್ಷೇತ್ರ ಎಲ್ಲಿ ಇದೆ ಎಂಬುದನ್ನು ನಿರ್ಧಾರ ಮಾಡಿ, ಮತ್ತು ರೈತರಿಗೆ ಅನುಕೂಲವಾಗುವಂತೆ ಪ್ರಸಕ್ತ ಸಾಲಿನಲ್ಲಿ 35 ತೊಗರಿ ಖರೀದಿ ಕೇಂದ್ರ ಸ್ಥಾಪಿಸಿಲು ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ, ಆಹಾರ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಪಂಚಾಯತ ಪ್ರಭಾರಿ ಯೋಜನಾ ನಿರ್ದೇಶಕರಾದ ಗುರನಾಥ ಎನ್ ಗೌಡಪ್ಪನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಎಲ್ಲಾ ತಾಲ್ಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ತಹಿಸಿಲ್ದಾರರು, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.