ಪ್ರಮುಖ ಸುದ್ದಿ

ಜನರೊಂದಿಗೆ ವಿನಯತೆಯಿಂದ ವರ್ತಿಸಿ – ಜಿಲ್ಲಾಧಿಕಾರಿ ಸ್ನೇಹಲ್ ಸೂಚನೆ

ಸಮಸ್ಯೆಗಳನ್ನು ಹೊತ್ತುಬಂದ ಜನರೊಂದಿಗೆ ಇರಲಿ ವಿನಯತೆ - ಡಿಸಿ ಸ್ನೇಹಲ್

ಜನರೊಂದಿಗೆ ವಿನಯತೆಯಿಂದ ವರ್ತಿಸಿ – ಜಿಲ್ಲಾಧಿಕಾರಿ ಸ್ನೇಹಲ್ ಸೂಚನೆ

ಸಮಸ್ಯೆಗಳನ್ನು ಹೊತ್ತುಬಂದ ಜನರೊಂದಿಗೆ ಇರಲಿ ವಿನಯತೆ – ಡಿಸಿ ಸ್ನೇಹಲ್

ಯಾದಗಿರಿಃ ತಾಲೂಕು ಕಚೇರಿಗೆ ಸಮಸ್ಯೆಗಳನ್ನು ಹೊತ್ತುಕೊಂಡು ಬರುವ ಜನರೊಂದಿಗೆ ವಿನಯತೆಯಿಂದ ವರ್ತಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿ ಜನರ ತೊಂದರೆಗಳಿಗೆ ಸ್ಪಂಧಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುಮಿಠಕಲ್ ತಹಶೀಲ್ದಾರ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ಭಾಗವಾಗಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಧಿಕಾರಿಗಳ ಕಾರ್ಯವೈಖರಿ ಮತ್ತು ಸಲ್ಲಿಕೆಯಾದ ಅರ್ಜಿಗಳನ್ನು ಖುದ್ದು ಪರಿಶೀಲಿಸಿ ಅವರು ಮಾತನಾಡಿದರು.

ಕಚೇರಿಯಲ್ಲಿನ ಕಂಪ್ಯೂಟರ್ ಆಪರೇಟರ್, ಗ್ರಾಮ ಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕರು, ಕಚೇರಿ ರಾಜಸ್ವ ನಿರೀಕ್ಷಕರು, ಸರ್ವೆ ಸೂಪರ್ ವೈಜರ್, ಶಿರಸ್ತೆದಾರ, ತಹಶೀಲ್ದಾರರ ಹತ್ತಿರ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಬಂದ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಗ್ರಾಮ, ಮಾಸಾಶನ, ತ್ರೀ ಆಂಡ್ ನೈನ್ ಮಿಸ್ ಮ್ಯಾಚ್, ಪೈಕಿ ಪಹಣಿ, ಮೋಜನಿ ಕಡತಗಳು, ಆರ್.ಟಿ ಸಿ, ಎಜೆಎಸ್ಕೆ ತಂತ್ರಾಂಶದಡಿ ಸ್ವೀಕೃತವಾದ ಅರ್ಜಿಗಳು, ನವೋದಯ ಆಪ್ ಮತ್ತು ಸ್ಮಶಾನ ಭೂಮಿಗಳ ಲಭ್ಯತೆ ಬಗ್ಗೆ ಹಾಗೂ ಸಕಾಲ ಯೋಜನೆಗಳ ಪ್ರಗತಿಯ ಮಾಹಿತಿ ಪಡೆದರು. ಸಕಾಲ ಅಡಿ ನೋಂದಾಯಿತ ಸೇವೆಗಳನ್ನು ಆದ್ಯತೆಯಲ್ಲಿ ಒದಗಿಸಿ ಪ್ರಗತಿ ಕುಂಠಿತವಾಗದಂತೆ ಎಚ್ಚರಿಕೆವಹಿಸಬೇಕು ಎಂದು ಸೂಚಿಸಿದರು.

ವಿವಿಧ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ;

ಪುರಸಭೆ ಕಾರ್ಯಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಆನಂತರ ಅದರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಾದ ಆಶ್ರಯ ಬಡಾವಣೆ, ಖಾಸಾ ಮಠದ ಹತ್ತಿರದ ಚರಂಡಿ ಮತ್ತು ರಸ್ತೆ ಕಾಮಗಾರಿ, ಪುರಭವನದಲ್ಲಿನ ಕಾಮಗಾರಿ, ಲಕ್ಷ್ಮೀ ನಗರ ಬಡಾವಣೆಯಲ್ಲಿನ ಸಾರ್ವಜನಿಕ ಉದ್ಯಾನವನ , ವಾಣಿಜ್ಯ ಮಳಿಗೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಗುರುಮಿಠಕಲ್ ತಹಶೀಲ್ದಾರ ಶರಣಬಸವ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button