ಹೈಸ್ಕೂಲ್ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡಿ- ಡಿಸಿ ಡಾ.ರಾಗಪ್ರಿಯಾ
12 ರಿಂದ 14 ವರ್ಷ ವಯೋಮಾನದ ಹೈಸ್ಕೂಲ್ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ
ಹೈಸ್ಕೂಲ್ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡಿ- ಡಿಸಿ ಡಾ.ರಾಗಪ್ರಿಯಾ
12 ರಿಂದ 14 ವರ್ಷ ವಯೋಮಾನದ ಹೈಸ್ಕೂಲ್ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ
ಯಾದಗಿರಿ– ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ 12 ರಿಂದ 14 ವರ್ಷ ವಯೋಮಾನದ, ಸರ್ಕಾರಿ ಮತ್ತು ಅನುದಾನಿತ ಹಾಗೂ ಅನುದಾನ ರಹಿತ ಹೈಸ್ಕೂಲ್ ಶಾಲೆಯ ಮಕ್ಕಳಿಗೆ ಕಡ್ಡಾಯವಾಗಿ ಕಾರ್ಬಿವ್ಯಾಕ್ಸ್ ಲಸಿಕೆ ನೀಡಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ 12 ರಿಂದ 14 ವರ್ಷ ವಯೋಮಾನದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕುರಿತು ಅಧಿಕಾರಿಗಳೊಂದಿಗೆ ಗೂಗಲ್ ಮೀಟಿಂಗ್ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 122 ಸರ್ಕಾರಿ, 15 ಅನುದಾನಿತ, 78 ಅನುದಾನ ರಹಿತ, 29 ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 244 ಹೈಸ್ಕೂಲ್‍ಗಳಿದ್ದು, ಲಸಿಕಾಕರಣಕ್ಕೆ 20 ಸಾವಿರ ವಿದ್ಯಾರ್ಥಿಗಳು ಅರ್ಹರಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಶಾಲೆಗೆಯೇ ತೆರಳಿ ಲಸಿಕೆ ನೀಡಬೇಕು ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿ, ತಾಲೂಕು ಶಿಕ್ಷಣಾಧಿಕಾರಿಗಳು ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಸೂಚಿಸಿದರು.
ಪಾಲಕರು ಲಸಿಕಾಕರಣಕ್ಕೆ ಸಹಕಾರ ನೀಡುವ ಮೂಲಕ ಸೋಂಕನ್ನು ತಡೆಗಟ್ಟುವುದಕ್ಕೆ ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ್, ಡಿಡಿಪಿಐ ಶಾಂತಗೌಡ ಪಾಟೀಲ್ ಹಾಗೂ ಇನ್ನಿತರ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.