ಯಾದಗಿರಿಃ 27 ಗ್ರಾಮ ಲೆಕ್ಕಿಗರ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ-DC
ಯಾದಗಿರಿಃ 27 ಗ್ರಾಮ ಲೆಕ್ಕಿಗರ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಯಾದಗಿರಿ: ಯಾದಗಿರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 27 (ಹೈದ್ರಾಬಾದ-ಕರ್ನಾಟಕ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳು) ಹುದ್ದೆಗಳು ಖಾಲಿ ಇದ್ದು, ಅರ್ಜಿಗಳನ್ನು ಆನ್ಲೈನ್ನಲ್ಲಿ ಸಲ್ಲಿಸಲು ದಿನಾಂಕ:29-04-2022 ಸಂಜೆ 05 ಗಂಟೆವರೆಗೆ ಸಲ್ಲಿಸಬಹುದೆಂದು ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ. ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳಿಗೆ ವರ್ಗೀಕರಣ ಮತ್ತು ಮೀಸಲಾತಿ ಅನ್ವಯ ಕರ್ನಾಟಕ ನಾಗರೀಕ ಸೇವೆಗಳು [ Revenue Subordinate Branch] [Cadre & Recruitment ][Amendment] ನಿಯಮಗಳು 2008 ನಿಯಮ 2 ರ ಅನ್ವಯ ಮತ್ತು 2009 ರನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಪತ್ರ ಸಂಖ್ಯೆ:ಕಂ.ಇ/04/ಬಿ.ಎಸ್.ಸಿ./2011 ದಿನಾಂಕ:25.02.2011 ಮತ್ತು ಸರಕಾರದ ಪತ್ರ ಸಂಖ್ಯೆ ಸಿಆಸುಇ/91/ಹೈಕಕೋ/2014 ದಿನಾಂಕ 06/12/2014 ಮತ್ತು ಪತ್ರ ಸಂಖ್ಯೆ/ಕಂಇ/32/ಬಿಎಸ್ಐ/2015 ದಿನಾಂಕ 02/03/2015ರಲ್ಲಿ ನಿರ್ದೇಶಿಸಲಾಗಿರುತ್ತದೆ.
ಅದರಂತೆ ಗ್ರಾಮಲೆಕ್ಕಿಗರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆನ್ ಲೈನ್ ಮೂಲಕ ಅಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಪಾವತಿ, ಹುದ್ದೆಗಳ ವರ್ಗೀಕರಣ, ಷರತ್ತುಗಳು, ಶೈಕ್ಷಣಿಕ ವಿದ್ಯಾರ್ಹತೆ, ವೇತನ ಶ್ರೇಣಿ, ಮೀಸಲಾತಿ, ವಯೋಮಿತಿ ಇನ್ನಿತರೆ ಮಾಹಿತಿಯು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ವೆಬ್ ಸೈಟ್.. http://yadgir-va.kar.nic.in ರಲ್ಲಿನ ಮಾಹಿತಿ ಸೂಚಿಯಲ್ಲಿ ಲಭ್ಯವಿರುತ್ತದೆ ಮತ್ತು ಸ್ಪಷ್ಟೀಕರಣ ಅಗತ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ: 08473-252703ಗೆ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.