ದೀಪಾವಳಿ: ಪಟಾಕಿ ಮಾರಾಟ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ದೀಪಾವಳಿ: ಪಟಾಕಿ ಮಾರಾಟ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಯಾದಗಿರಿ- ದೀಪಾವಳಿಗೆ ಕೋವಿಡ್-19 ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಟಾಕಿ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಸೂಚಿಸಿದ್ದಾರೆ.
ಅವರು ಈ ಸಂಬಂಧ ಶನಿವಾರ ತಮ್ಮ ಕಚೇರಿಯಲ್ಲಿ ಪಟಾಕಿ ಮಾರಾಟಗಾರರೊಂದಿಗೆ ಸಭೆ ನಡೆಸಿ, ಮಾತನಾಡಿದರು.
ಹಬ್ಬಗಳ ಆಚರಣೆ ಸಂದರ್ಭದಲ್ಲಿ ಜನರ ಒಗ್ಗೂಡುವಿಕೆ ಹೆಚ್ಚಾಗಿರುವುದರಿಂದ ಹೆಚ್ಚಿನ ನಿಗಾ ಇರಿಸುವಂತೆ ಸೂಚಿಸಲಾಗಿರುತ್ತದೆ. ಪಟಾಕಿ ಮಾರಾಟಗಾರರು ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದರು.
ಹಸಿರು ಪಟಾಕಿಗಳನ್ನು ಮಾತ್ರ ಮಾರಾಟಕ್ಕೆ ಅವಕಾಶ ಇರಲಿದೆ. ಸ್ಟಾಲುಗಳ ಮಧ್ಯೆ ನಿಗದಿತ ಅಂತರ ಇರಬೇಕು. ಎಲ್ಲ ಸುರಕ್ಷಾ ಪರಿಕರಗಳನ್ನು ಸ್ಟಾಲುಗಳಲ್ಲಿ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪಟಾಕಿ ಮಳಿಗೆಗಳನ್ನು ನವೆಂಬರ್ 1 ರಿಂದ 10 ರವರೆಗೆ ಮಾತ್ರ ತೆರೆಯಲು ಅನುಮತಿ ನೀಡಲಾಗುತ್ತದೆ. ಜನವಸತಿ ಪ್ರದೇಶಗಳಿಂದ ದೂರದಲ್ಲಿ ಮಾತ್ರ ಸ್ಟಾಲು ತೆರೆಯಬೇಕು. ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಿ, ಅನುಮತಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್,ನಗರಾಭಿವೃದ್ದಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಬಕ್ಕಪ್ಪ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಮತ್ತಿತರರು ಇದ್ದರು.