ಪ್ರಮುಖ ಸುದ್ದಿ
ದೆಹಲಿ ಚುನಾವಣೆ ಮುಹೂರ್ತ ಫಿಕ್ಸ್ ಫೆ.8 ಕ್ಕೆ ಮತದಾನ
ನವದೆಹಲಿಃ ಆಮ್ ಆದ್ಮಿ ಪಕ್ಷ ದೆಹಲಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು. ಇದೀಗ ಅದರ ಆಡಳಿತ ಅವಧಿ ಇದೇ ಫೆ.22 ಕ್ಕೆ ಕೊನೆಗೊಳ್ಳಲಿದೆ.
ಹೀಗಾಗಿ ಇದೇ ಫೆ.8 ರಂದು ಇಲ್ಲಿ ಚುನಾವಣೆ ನಡೆಯಲಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಾಧಿಕಾರಿ ಸುನೀಲ್ ಅರೋರಾ ವಿವರಿಸಿದರು.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದರು. ಫೆ.8 ರಂದು ಮತದಾನ ನಡೆಯಲಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಘೋಷಿಸಿದ ಅವರು, ಫೆ.11 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು. ದೆಹಲಿಯಲ್ಲಿ ಒಟ್ಟು 1.46 ಕೋಟಿ ಮತದಾರರಿದ್ದು, ಮತದಾನಕ್ಕಾಗಿ ಒಟ್ಟು 13,750 ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.