ಪ್ರಮುಖ ಸುದ್ದಿ

ದೆಹಲಿ BREAKING- ಶಾಲಾ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲೆಗೆ ಹಿಂದೇಟು

ದೆಹಲಿ BREAKING- ಶಾಲಾ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಹೊಸದಿಲ್ಲಿ: ಶಾಹದಾರದ ಆನಂದ್‌ ವಿಹಾರ್‌ ಪ್ರದೇಶದಲ್ಲಿ ಶಾಲಾ ಬಸ್‌ನಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು, ವಾಹನದ ಚಾಲಕ, ಕಂಡಕ್ಟರ್ ಮತ್ತು ಶಾಲಾ ಅಟೆಂಡರ್‌ನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ಮಾಹಿತಿ ನೀಡಿರುವದು ವರದಿಯಾಗಿದೆ.

ಗಾಜಿಯಾಬ್‌ನ ಇಂದಿರಾ ಪುರಂನಲ್ಲಿರುವ ತನ್ನ ಮನೆಗೆ ಬಾಲಕಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಖಾಸಗಿ ಶಾಲೆಯು ದೂರು ಮತ್ತು ಪೋಷಕರ ಹೇಳಿಕೆಯನ್ನು ದಾಖಲಿಸಿದೆ ಎಂದು ಅಧಿಕಾರಿ ತಿಳಿಸಿರುವದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಮತ್ತೊಂದು ಆಘಾತಕಾರಿ ಘಟನೆಯಲ್ಲಿ, ಮನೆಗೆ ಹಿಂದಿರುಗುತ್ತಿದ್ದಾಗ ಆನಂದ್ ವಿಹಾರ್ ಪ್ರದೇಶದಲ್ಲಿ ಶಾಲಾ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಕುರಿತು ಪಾಲಕರು ಪ್ರಕರಣ ದಾಖಲಿಸಲು ಮುಂದೆ ಬಂದಿಲ್ಲ ಎಂದು ಹೇಳಲಾಗುತ್ತದೆ. ಆದಾಗ್ಯೂ, ಅಪರಾಧದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸೆಕ್ಷನ್ 10 ರ ಅಡಿಯಲ್ಲಿ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ಬಸ್ ಚಾಲಕ, ಕಂಡಕ್ಟರ್ ಮತ್ತು ಶಾಲೆಯ ಅಟೆಂಡರ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button