Homeಜನಮನಪ್ರಮುಖ ಸುದ್ದಿ

ಇಂದು ಸಿಬಿಐ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ

ದೆಹಲಿ: ಸಿಬಿಐ ಬಂಧನ ಪ್ರಶ್ನಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. 

ಸಿಬಿಐ ಬಂಧನ ಪ್ರಶ್ನಿಸಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಬಳಿಕ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಬಿಐ ಬಂಧಿಸಿತ್ತು.

ಜೂನ್ 29 ರಂದು, ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12 ರವರೆಗೆ ವಿಚಾರಣಾ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಅವರ ಹೆಸರು ಪ್ರಮುಖ ಪಿತೂರಿದಾರರಲ್ಲಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವ ಕಾರಣ, ಅವರ ಹೆಚ್ಚಿನ ಕಸ್ಟಡಿ ವಿಚಾರಣೆ ಅಗತ್ಯವಾಗಬಹುದು ಎಂದು ಹೇಳಿದೆ.

ಕೇಜ್ರಿವಾಲ್ ಅವರು ತನಿಖಾ ತಂಡದೊಂದಿಗೆ ಸಹಕರಿಸುತ್ತಿಲ್ಲ. ಮೂರು ದಿನಗಳ ಕಸ್ಟಡಿಯಲ್ಲಿ ನುಣುಚಿಕೊಳ್ಳುವ ಉತ್ತರವನ್ನು ನೀಡಿದ್ದಾರೆ ಎಂದು ಸಿಬಿಐ ತಿಳಿಸಿತ್ತು.

Related Articles

Leave a Reply

Your email address will not be published. Required fields are marked *

Back to top button