ಪ್ರಮುಖ ಸುದ್ದಿ
ಕೇಜ್ರಿವಾಲ್ ನಿವಾಸದಲ್ಲಿನ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ದೆಹಲಿ ಪೊಲೀಸ್
ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ತನಿಖೆಗಾಗಿ ದೆಹಲಿ ಪೊಲೀಸರ ತಂಡ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿತ್ತು.
ಈ ವೇಳೆ ಸಿಸಿಟಿವಿ ಡಿವಿಆರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ದೃಶ್ಯಾವಳಿಗಳನ್ನು ತಿರುಚಲಾಗುತ್ತಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ. ಈ ಪ್ರಕರಣದ ಸಂಬಂಧ ಈಗಾಗಲೇ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಅವರು ಕಿರುಕುಳ, ಅಪರಾಧಿ ನರಹತ್ಯೆಗೆ ಯತ್ನಿಸಿದ ಆರೋಪಗಳನ್ನು ಎದುರಿಸುತ್ತಿದ್ದಾರೆ.