Homeಅಂಕಣಪ್ರಮುಖ ಸುದ್ದಿ

ಚಿಕ್ಕಮಗಳೂರು: 300ರ ಗಡಿ ದಾಟಿದ ಮಿತಿ ಮೀರಿದ ಡೆಂಗ್ಯೂ ಪ್ರಕರಣ

ಚಿಕ್ಕಮಗಳೂರು: ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ‌ದಾಟಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ತಾಲೂಕು ಒಂದರಲ್ಲೇ 250 ಪ್ರಕರಣಗಳಿದ್ದು ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ಕಳೆದ ಎರಡು ತಿಂಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಗ್ಯೂ ಕಂಫರ್ಮ್ ಅನ್ನುವ ರೀತಿಯ ಸ್ಥಿತಿ ಇದೆ. ಆದರೆ, ಅದೃಷ್ಟವಶಾತ್ ಈವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಜ್ವರ ಕಾಣಿಸಿಕೊಂಡರೇ ಮನೆಯಲ್ಲಿ ಔಷಧಿ ತೆಗೆದುಕೊಳ್ಳುವುದನ್ನು ಬಿಟ್ಟು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ಡೆಂಗ್ಯೂ ಪ್ರಕರಣ ತರೀಕೆರೆ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಎನ್. ಆರ್. ಪುರ, ಕೊಪ್ಪ ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಒಂದು ದಶಕದ ಬಳಿಕ ಈ ಪರಿ ಮಹಾಮಾರಿ ಹರಡಿದ್ದು ಇದೇ ಮೊದಲು. ಬೇಸಿಗೆ ಅವಧಿಯಲ್ಲಿ ಮಳೆ ಇಲ್ಲದೆ ಚರಂಡಿ, ಮೋರಿ-ಕಾಲುವೆಗಳಲ್ಲಿ ನೀರು ನಿಂತು ಸೊಳ್ಳೆಗಳ ಲಾರ್ವ ಪ್ರಮಾಣ ಹೆಚ್ಚಾಗಿ ಸೊಳ್ಳೆಗಳ ಕಾಟವು ಜಿಲ್ಲೆಯಲ್ಲಿ ಮಿತಿ ಮೀರಿದೆ. ಇದರ ಪರಿಣಾಮ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ರಂದು ವೈದ್ಯರು ತಿಳಿಸಿದ್ದಾರೆ. ಈ ಪರಿ ಡೆಂಗ್ಯೂ ಮಹಾಮಾರಿ ಜಿಲ್ಲೆಯನ್ನು ಕಾಡುತ್ತಿದ್ದು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮತ್ತಷ್ಟು ಎಚ್ಚೆತ್ತುಕೊಳ್ಳುವ ಅವಶ್ಯಕತೆ ಇದೆ. Ad

Related Articles

Leave a Reply

Your email address will not be published. Required fields are marked *

Back to top button