ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲೇ ನಡೆಯಿತಂತೆ ಘರ್ಷಣೆ!
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಧರ್ಮಸ್ಥಳಕ್ಕೆ ನಿತ್ಯ ಸಾವಿರಾರು ಭಕ್ತರು ಭೇಟಿ ನೀಡಿ ದರ್ಶನ ಪಡೆಯುತ್ತಾರೆ. ಪರಿಣಾಮ ಸಹಜವಾಗಿಯೇ ಭಕ್ತರು ದೊಡ್ಡದಾದ ಸರದಿ ಸಾಲಿನಲ್ಲಿ ನಿಂತಿರುತ್ತಾರೆ. ಆದರೆ, ಇತ್ತೀಚೆಗೆ ಸರದಿ ಸಾಲಿನಲ್ಲಿ ನಿಂತಿರುವ ಭಕ್ತರು ಹಾಗೂ ದೇಗುಲದ ಭದ್ರತಾ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ತಾರಕಕ್ಕೇರಿ ಘರ್ಷಣೆ ನಡೆದಿದೆ ಎನ್ನಲಾಗಿದ್ದು ಭಕ್ತರು ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದೀಗ ಮಂಜುನಾಥನ ಸನ್ನಿಧಿಯಲ್ಲಿ ನಡೆದ ಎನ್ನಲಾದ ಘರ್ಷಣೆಯ ವಿಡಿಯೋ ವೈರಲ್ ಆಗಿದೆ.
ಘರ್ಷಣೆ ವಿಷಯ ತಿಳಿಯುತ್ತಿದ್ದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಅಂತೆಯೇ ಘಟನೆಗೆ ಕಾರಣವಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಧರ್ಮಕ್ಕೆ ಹೆಸರಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲೇ ಭಕ್ತರು ಮತ್ತು ಭದ್ರತಾ ಸಿಬ್ಬಂದಿ ಹೊಡೆದಾಡಿದ್ದಾರೆಂಬ ಸುದ್ದಿ ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.