ಪ್ರಮುಖ ಸುದ್ದಿ
ಧಾರವಾಡಃ SDM ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಪೋಟ

ಧಾರವಾಡಃ SDM ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಪೋಟ
ಧಾರವಾಡಃ ನಗರದ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಕಾಲೇಜಿನಲ್ಲಿ ಗ್ಯಾದರಿಂಗ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎನ್ನಲಾಗಿದೆ.
ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ವಿದ್ಯಾರ್ಥಿಗಳ ಸ್ವ್ಯಾಬ್ ಕಲೆಕ್ಷನ್ ಮಾಡಿ ಪರೀಕ್ಷಿಸಲಾಗಿ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ ಹಚ್ಚಲಾಗಿದೆ.
ಈಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕು ತಗುಲಿದ ವಿದ್ಯಾರ್ಥಿಗಳ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಕಾಲೇಜು ಮೂಲಗಳು ತಿಳಿಸಿವೆ.
ಎರಡು ಡೋಸ್ ಪಡೆದ ಕೆಲ ವಿದ್ಯಾರ್ಥಿಗಳಲ್ಲೂ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ತಗುಲಿದ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.